ಕಾಸರಗೋಡು (ವಿಶ್ವ ಕನ್ನಡಿಗ ನ್ಯೂಸ್) : ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರಿಗೆ 23 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 33.33 ಲಕ್ಷ ರೂ.ಗಳ ದಂಡ ವಿಧಿಸಿ ಕಾಸರಗೋಡು ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎ.ಮನೋಜ್ ಅವರು ಅಡೂರು ಪೊಲೀಸ್ ಠಾಣೆ ವ್ಯಾಪ್ತಿಯ ಎ.ಪಿ.ನಿಸಾರ್ ಮತ್ತು ಎಂ.ಉಮರ್ ಷಾಫಿ ಅವರನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
2017ರ ಜನವರಿಯಲ್ಲಿ ಈ ಘಟನೆ ನಡೆದಿತ್ತು. ಆರೋಪಿಗಳು 17 ವರ್ಷದ ಬಾಲಕಿಯನ್ನು ಹತ್ತಿರದ ಕಾಡಿಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಡೂರ್ ಇನ್ಸ್ಪೆಕ್ಟರ್ ಎಂ.ಎ.ಮ್ಯಾಥ್ಯೂ ಅವರು ಅಡೂರ್ ಪೊಲೀಸರು ದಾಖಲಿಸಿದ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ, ಅಡ್ವಕೇಟ್. ಪ್ರಕಾಶ್ ಅಮ್ಮಣ್ಣಾಯ ಕಾಣಿಸಿಕೊಂಡರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.