ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಕಾರೊಂದು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆ. 14 ರ ಸಂಜೆ ನಡೆದಿದೆ. ನಿಡ್ಪಳ್ಳಿ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್ ಭಟ್ ಅಪಘಾತದಲ್ಲಿ ಮೃತಪಟ್ಟವರು.
ಬೆಟ್ಟಂಪಾಡಿ ಕಡೆ ಹೋಗುತ್ತಿದ್ದ ಫಾರ್ಡ್ ಫೀಗೋ ಕಾರು ಎರಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ತೋಟಕ್ಕೆ ಉರುಳಿದೆ. ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.