(ವಿಶ್ವ ಕನ್ನಡಿಗ ನ್ಯೂಸ್) : ಮದುವೆಯಾದ ನಾಲ್ಕನೇ ದಿನ, ನವವಿವಾಹಿತರು ಅಪಘಾತದಲ್ಲಿ ದುರಂತ ಅಂತ್ಯವನ್ನು ಕಂಡಿದ್ದಾರೆ. ಒಡಿಶಾದಲ್ಲಿ ವೇಣು-ಪ್ರವಳಿಕಾ ದಂಪತಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಫೆಬ್ರವರಿ 10 ರಂದು ಇಬ್ಬರೂ ಮದುವೆಯಾಗಿದ್ದರು. ಪತ್ನಿ ಸಹೋದರನ ಮನೆಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ.
ಪ್ರವಳಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವೇಣು ಅವರನ್ನು ಬೆರ್ಹಾಂಪುರ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.