ಕುವೈತ್ ಸಿಟಿ (ವಿಶ್ವ ಕನ್ನಡಿಗ ನ್ಯೂಸ್) : ಟ್ರಕ್ ಮತ್ತು ಇನ್ನೊಂದು ವಾಹನದ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕುವೈತ್ ನಲ್ಲಿ ನಡೆದಿದೆ. ಮೂವರು ಗಾಯಗೊಂಡಿದ್ದಾರೆ. ಕಬಾದ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕುವೈತ್ ಅಗ್ನಿಶಾಮಕ ಇಲಾಖೆಯ ಮಹಾನಿರ್ದೇಶನಾಲಯದ ಸಾರ್ವಜನಿಕ ಸಂಪರ್ಕ ಮತ್ತು ಮಾಧ್ಯಮ ವಿಭಾಗದ ಪ್ರಕಾರ, ಕೇಂದ್ರ ಕಾರ್ಯಾಚರಣೆ ಇಲಾಖೆಯಿಂದ ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಕಬಾದ್ ಅಗ್ನಿಶಾಮಕ ಕೇಂದ್ರದ ರಕ್ಷಣಾ ತಂಡವು ಸ್ಥಳಕ್ಕೆ ತಲುಪಿದೆ.
ಮೂವರು ಗಂಭೀರವಾಗಿ ಗಾಯಗೊಂಡು ರಕ್ಷಕರು ಬರುವಷ್ಟರಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರು ಟ್ರಕ್ನೊಳಗೆ ಸಿಲುಕಿಕೊಂಡಿದ್ದಾರೆ. ಅವರನ್ನು ಹೊರತೆಗೆದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಮೃತರು ಮತ್ತು ಗಾಯಗೊಂಡವರ ರಾಷ್ಟ್ರೀಯತೆ ಸೇರಿದಂತೆ ಯಾವುದೇ ಇತರ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.