ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಕುಂಪಲ ಎಂಬಲ್ಲಿ ತಾಯಿ ಬೈದರು ಎಂದು ಆತ್ಮಹತ್ಯೆಗೆ ಯತ್ನಿಸಿದ್ದ ಹದಿನೇಳರ ಹರೆಯದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ನಗರದ ರಾಮಕೃಷ್ಣ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ, ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ(17) ಮೃತಪಟ್ಟವರು.
ಮೊನ್ನೆ ಮಧ್ಯಾಹ್ನ ಉಪ್ಪಿನಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ತಾಯಿ ಮನೆಗೆ ಬಂದಾಗ ರಜೆಯಲ್ಲಿದ್ದ ಧನ್ಯಾ ಮನೆಯಲ್ಲಿ ಇರಲಿಲ್ಲ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಆಗಮಿಸಿದ ಧನ್ಯಾರನ್ನು ಇಷ್ಟು ಹೊತ್ತು ಎಲ್ಲಿ ಹೋಗಿದ್ದೆ ಎಂದು ಪ್ರಶ್ನಿಸಿ ತಾಯಿ ಬೈದಿದ್ದರು. ಇದರಿಂದ ನೊಂದ ಧನ್ಯಾ, ತಾಯಿ ಪಕ್ಕದ ಮನೆಗೆ ತೆರಳಿದ್ದ ವೇಳೆ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಧನ್ಯಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.