ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಪಿಕ್ ಅಪ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೂಡಬಿದಿರೆ ಕಾಲೇಜಿನ ಪದವಿ ವಿದ್ಯಾರ್ಥಿ ಪಿ.ಎಂ.ಉಜ್ವಲ್ ಹೆಗ್ಡೆ (19) ಸೋಮವಾರ ಬೆಳ್ತಂಗಡಿಯ ಕೊಕ್ರಾಡಿ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕಾಲೇಜಿಗೆ ತೆರಳುತ್ತಿದ್ದ ಉಜ್ವಲ್ ಅವರ ಬೈಕಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವ್ಯಾನ್ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣರಾದ ವ್ಯಾನ್ ಚಾಲಕ ಹರೀಶ್ ಪೂಜಾರಿ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.