ಉಳ್ಳಾಲ (ವಿಶ್ವ ಕನ್ನಡಿಗ ನ್ಯೂಸ್) : ಇಂದು ನಸುಕಿನ ಜಾವ ನೇತ್ರಾವತಿ ಸೇತುವೆಯಲ್ಲಿ ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನಡೆದಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಲ್ ಮೃತಪಟ್ಟ ಯುವಕ.
ನೌಫಲ್ ಜೊತೆ ಇದ್ದ ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅದೇ ರೀತಿ ಇನ್ನೊಂದು ಸ್ಕೂಟರಿನಲ್ಲಿದ್ದ ಗಾಯಾಳುವಿನ ವಿವರ ತಿಳಿದುಬಂದಿಲ್ಲ. ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ತೆರಳುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.