ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ.
ಶಶಿಕುಮಾರ್ ಅಲ್ಲದೇ ಇತರ ಏಳು ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬೆಂಗಳೂರು ವೈರ್’ಲೆಸ್ ಎಸ್.ಪಿಯಾಗಿದ್ದ ಡಿ.ಕಿಶೋರ್ ಬಾಬು ಅವರನ್ನು ಗುಪ್ತದಳ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ. ಕೆಎಸ್ ಆರ್’ಪಿ ಬೆಂಗಳೂರು ಕಮಾಂಡೆಂಟ್ ಆಗಿರುವ ಕೆ.ವಂಶಿಕೃಷ್ಣ ಅವರನ್ನು ಬೆಂಗಳೂರು ವಯರ್ ಲೆಸ್ ಎಸ್.ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಸಿಎಆರ್ ಡಿಸಿಪಿಯಿಂದ ಮುಹಮ್ಮದ್ ಸುಜೀತಾ ಎಂ.ಎಸ್. ಅವರನ್ನು ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅರುಣಾಂಶುಗಿರಿ ಅವರನ್ನು ಸಿಎಆರ್ ಬೆಂಗಳೂರು ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಲೋಕಾಯುಕ್ತ ಎಸ್.ಪಿ. ಯಶೋಧಾ ವಂಟಗೋಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.