ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೋಲಾರದ ಪೂಲ್ ಷಾ ಮೊಹಲ್ಲಾದ ನಿವಾಸಿ ಜಹೀರ್ ಆಲಂ ನೇಮಕಗೂಂಡಿದ್ದಾರೆ. ಈ ಕೂಡಲೇ ಜವಾಬ್ದಾರಿ ವಹಿಸಿಕೊಂಡು ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ರಾಜ್ಯಾದ್ಯ೦ತ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಂತೆ ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತನ್ನ ಆಯ್ಕೆಗೆ ಸಹಕರಿಸಿದ ಎಂ.ಎಲ್.ಸಿ. ನಸೀರ್ ಅಹಮದ್ ಹಾಗೂ ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಅವರಿಗೆ ಜಹೀರ್ ಆಲಂ ಅವರು ಕೃತಜ್ಞತೆಗಳನ್ನು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.