ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಇಂದು ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 80ನೇ ಜನ್ಮದಿನ. ಈ ದಿನದಂದು ಪ್ರಧಾನಮಂತ್ರಿಯವರು ಅವರ ಹುಟ್ಟೂರಾದ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ದೇಶಕ್ಕೆ ಸಮರ್ಪಿಸಿದರು. ಕನ್ನಡ ಜನರಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಯಡಿಯೂರಪ್ಪ ಅವರು ಮುಂದಿನ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದು ಪಿಧಾನಿ ಹೇಳಿದರು.
ತಮ್ಮ ಹುಟ್ಟುಹಬ್ಬದಂದು ಬಂದಿದ್ದಕ್ಕಾಗಿ ಯಡಿಯೂರಪ್ಪ ಅವರು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು. ಇದು ಕರ್ನಾಟಕದ ಒಂಬತ್ತನೇ ಪ್ರಾದೇಶಿಕ ವಿಮಾನ ನಿಲ್ದಾಣವಾಗಿದೆ. ವಿಮಾನ ನಿಲ್ದಾಣವನ್ನು 384 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಕರ್ನಾಟಕ ವಿಧಾನಸಭೆಯಲ್ಲಿ ಯಡಿಯೂರಪ್ಪ ಅವರ ಬೀಳ್ಕೊಡುಗೆ ಭಾಷಣದಿಂದ ನಾನು ಪ್ರಭಾವಿತನಾಗಿದ್ದೇನೆ ಎಂದು ಮೋದಿ ಹೇಳಿದರು. ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರಿಡುವ ಸಚಿವ ಸಂಪುಟದ ನಿರ್ಧಾರವನ್ನು ಸ್ವತಃ ಅವರೇ ತಿರಸ್ಕರಿಸಿದ್ದಾರೆ. ನಂತರ, ಕನ್ನಡ ಮಹಾನ್ ಕವಿ ಕುವೆಂಪು ಅವರ ಹೆಸರನ್ನು ಇಡಲು ನಿರ್ಧರಿಸಲಾಯಿತು. ಪ್ರಧಾನಮಂತ್ರಿಯವರು ವಿವಿಧ ರಸ್ತೆ ಮತ್ತು ರೈಲು ಯೋಜನೆಗಳನ್ನು ಉದ್ಘಾಟಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.