ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಾಲಿಬಾಲ್ ಆಡುತ್ತಿದ್ದ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಾರ್ಕಳದ ಕುಕುಂತೂರು ನಿವಾಸಿ ಕೆ.ವಿ.ಸಂತೋಷ್ (34) ಎಂದು ಗುರುತಿಸಲಾಗಿದೆ. ಕಾರ್ಕಳದ ಶೀದುರ್ಗ ಏಡ್ಸ್ ಹೈಸ್ಕೂಲ್ ಮೈದಾನದಲ್ಲಿ ಸಂಜೆ ಈ ಘಟನೆ ನಡೆದಿದೆ.
ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಸಂತೋಷ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಅವರು ಐದು ವರ್ಷಗಳಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.