ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ವಾಟರ್ ಹೀಟರ್ನಿಂದ ವಿದ್ಯುತ್ ಶಾಕ್ ತಗುಲಿ ತಾಯಿ ಹಾಗೂ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ತಾಯಿ ಜ್ಯೋತಿ ಹಾಗೂ ಅವರ 4 ವರ್ಷದ ಮಗ ಜಯಾನಂದ್ ಮೃತಪಟ್ಟವರು.
ಸ್ನಾನಗೃಹದಲ್ಲಿ ನೀರು ಬಿಸಿ ಮಾಡಲು ಇಟ್ಟಿದ್ದ ವಾಟರ್ ಹೀಟರ್ನಿಂದ ಬಾಲಕ ಜಯಾನಂದ್ಗೆ ಕರೆಂಟ್ ಶಾಕ್ ತಗುಲಿತ್ತು. ಮಗ ಶಾಕ್ ತಗುಲಿ ಒದ್ದಾಡುತ್ತಿರುವುದನ್ನು ಕಂಡ ತಾಯಿ ಆತನನ್ನು ಕಾಪಾಡಲು ಪ್ರಯತ್ನಿಸಿದಾಗ ಆಕೆಗೂ ಕರೆಂಟ್ ಶಾಕ್ ತಗುಲಿದೆ. ಇದರಿಂದ ತಾಯಿ ಹಾಗೂ ಮಗು ಇಬ್ಬರೂ ದಾರುಣವಾಗಿ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ಮೂಲದ ಜ್ಯೋತಿ ತನ್ನ ಗಂಡ ಹಾಗೂ ಮಗನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನೆಲೆಸಿದ್ದರು. ಅವರ ಹೊಟ್ಟೆಪಾಡಿಗಾಗಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.