ಕಾಸರಗೋಡು (ವಿಶ್ವ ಕನ್ನಡಿಗ ನ್ಯೂಸ್) : ಕಾಸರಗೋಡು ಮೀನುಮಾರುಕಟ್ಟೆ ಬಳಿ ಕೆಎಸ್ಆರ್ಟಿಸಿ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ಯುವಕರೊಬ್ಬರು ಮೃತಪಟ್ಟಿದ್ದಾರೆ. ಮೊಗ್ರಾಲ್ ಪುತ್ತೂರು ಕಡವತ್ ಮೊಘರ್ ನ ಅಬ್ದುಲ್ ಖಾದರ್ ಫೌಜಿಯಾ ದಂಪತಿಯ ಪುತ್ರ ಫಾಝಿಲ್ ತಬ್ಸೀರ್ (23) ಮೃತಪಟ್ಟ ಯುವಕ.
KL14AA8328 ಸಂಖ್ಯೆಯ ಸ್ಕೂಟರ್ ಅಪಘಾತಕ್ಕೀಡಾಗಿದೆ. ಫಾಝಿಲ್ ಕಾಸರಗೋಡಿನ ಹಳೆ ಬಸ್ ನಿಲ್ದಾಣದಲ್ಲಿ ಗಾರ್ಮೆಂಟ್ ಸಗಟು ವ್ಯಾಪಾರಿ. ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾಸರಗೋಡಿನ ಹಳೆಯ ಬಸ್ ನಿಲ್ದಾಣದ ಬದ್ರಿಯಾ ಹೋಟೆಲ್ ಬಳಿ ಏಕಮುಖ ಸಂಚಾರದಲ್ಲಿ ಈ ಘಟನೆ ನಡೆದಿದೆ. ಕೂಡಲೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಸುದ್ದಿ ತಿಳಿದ ಕಾಸರಗೋಡು ನಗರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಕೆಎಸ್ಆರ್ಟಿಸಿ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.