ದಮಾಮ್ (ವಿಶ್ವ ಕನ್ನಡಿಗ ನ್ಯೂಸ್) : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ನಜಾಮ್(63) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತಿರುವನಂತಪುರಂನ ಮಟ್ಟಪಲ್ಲಿ ಮೂಲದ ಮುಹಮ್ಮದ್ ನಜಾಮ್ ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಸಾಮಾಜಿಕ ಕಾರ್ಯಗಳಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. ಇವರು ಮಾಜಿ ಡಿಜಿಪಿ ಒ.ಎಂ.ಖಾದರ್ ಅವರ ಪುತ್ರ.
ಒಂದು ವಾರದ ಹಿಂದೆ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ನಜಾಮ್ ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಪತ್ನಿ: ಸಜ್ನಾ ನಜಾಮ್. ಮಕ್ಕಳು: ನೀಮಾ ನಜಾಮ್ ಮತ್ತು ರಿಯಾ ನಜಾಮ್.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.