ಚೆನ್ನೈ (ವಿಶ್ವ ಕನ್ನಡಿಗ ನ್ಯೂಸ್) : ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಫೆ.28 ಮಂಗಳವಾರ ಮುಂಜಾನೆ ನಡೆದಿದೆ. ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಮುಂಜಾನೆ ಸೈಕಲ್ ನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರಿಗೆ ಕಡೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು, ಮರಕ್ಕೆ ಗುದ್ದಿದೆ. ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿಜಯ್, ರಫೀಕ್ ಮತ್ತು ಸೂರ್ಯ ಎನ್ನುವ ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಾರ್ವಜನಿಕರು ಘಟನಾ ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.