ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) : ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ಇವರು ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಭೂಮಿಕಾ ನಾಪತ್ತೆಯಾದ ಯುವತಿ ಎಂದು ತಿಳಿದುಬಂದಿದೆ. ಇವರು ಫೆಬ್ರವರಿ 26ರಂದು ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ಇವರ ಚಹರೆ ಇಂತಿದೆ ; 5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ.(08254) 258233, 9480805460 ,ಬೈಂದೂರು ವೃತ್ತ ನಿರೀಕ್ಷಕರ ಕಚೇರಿ (08254) 251031, 9480805434ನ್ನು ಸಂಪರ್ಕಿಸುವಂತೆಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.