ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಬಂಧಿಸಿದೆ ಎಂದು ತಿಳಿದು ಬಂದಿದೆ.
ಮಡಿಕೇರಿ ಮೂಲದ ತುಫೈಲ್ ಬಂಧಿತ ಆರೋಪಿ. ಪ್ರವೀಣ್ ನೆಟ್ಟಾರು ಕೊಲೆ 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಆರೋಪಿಗಳನ್ನು ಬಂಧಿಸಲಾಗಿದ್ದು, ತುಫೈಲ್ ಪತ್ತೆಗೆ ಎನ್ಐಎ ಐದು ಲಕ್ಷ ರೂ ನಗದು ಬಹುಮಾನ ಘೋಷಿಸಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.