ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಉದ್ಯಮಿಯೊಬ್ಬರು ಗುರುಪುರದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಭಾರತೀಯ ಜೇಸಿಸ್ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51) ಆತ್ಮಹತ್ಯೆ ಮಾಡಿಕೊಂಡವರು.
ಮೂಡುಬಿದಿರೆಯಲ್ಲಿ ಮಹಾವೀರ ಎಲೆಕ್ಟ್ರಾ ನಿಕ್ಸ್ ಸಂಸ್ಥೆಯನ್ನು ಸ್ಥಾಪಿಸಿ ಮುನ್ನಡೆಸುತಿದ್ದ ಆಶಿತ್ ಕುಮಾರ್ ಅವರು, ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವರಾಗಿದ್ದರು. ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಬಳಿಕ ಇವರು ಖಾಸಗಿ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿ ಸೇರ್ಪಡೆಗೊಂಡು ಮಂಗಳೂರಿನಲ್ಲಿ ನೆಲೆಸಿದ್ದರು.
ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಮೂಡುಬಿದಿರೆ ತ್ರಿಭುವನ್ ಜೇಸಿಐ ಅಧ್ಯಕ್ಷರಾಗಿ, ವಲಯ 15ರ ವಲಯಾಧಿಕಾರಿ, ವಲಯಾಧ್ಯಕ್ಷರಾಗಿ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದರು. ಕೇಳದಪೇಟೆ ಬಸದಿಯ ಜೀರ್ಣೋದ್ಧಾರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.