ಪಡುಬಿದ್ರಿ (ವಿಶ್ವ ಕನ್ನಡಿಗ ನ್ಯೂಸ್) : ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆ ಮೇಲೆ ಟ್ಯಾಂಕರ್ ಹಾಗು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿಗಳಾದ ದಂಪತಿ ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಅಕ್ಬರ್ ಪಾಶ ಹಾಗೂ ಖತೀಜಾಬಿ ಮೃತಪಟ್ಟವರು.
ದಂಪತಿ ತಮಗಾಗಿ ಪಾಸ್ ಪೋರ್ಟ್ ಮಾಡಿಸಲೆಂದು ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಹೊರಟಿದ್ದರು. ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ತೀರ್ಥಹಳ್ಳಿ ಮೂಲದ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.