ಲಕ್ನೋ (ವಿಶ್ವ ಕನ್ನಡಿಗ ನ್ಯೂಸ್) : ಲಕ್ನೋ ಸೂಪರ್ ಜೈಂಟ್ಸ್ ಹೊಸ ಜರ್ಸಿಯನ್ನು ಬಿಡುಗಡೆ ಮಾಡಿದೆ. ಮುಂಬರುವ ಐಪಿಎಲ್ ಋತುವಿನಲ್ಲಿ ಗಾಢ ನೀಲಿ ಬಣ್ಣದ ಜರ್ಸಿಯನ್ನು ಪರಿಚಯಿಸಲಾಗಿದೆ. ಲಖನೌ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ, ನಾಯಕ ಕೆಎಲ್ ರಾಹುಲ್, ತಂಡದ ಸಲಹೆಗಾರ ಗೌತಮ್ ಗಂಭೀರ್ ಮತ್ತು ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜಯ್ ಶಾ ಜಂಟಿಯಾಗಿ ಹೊಸ ಜರ್ಸಿಯನ್ನು ಬಿಡುಗಡೆ ಮಾಡಿದರು.
ಕಳೆದ ಋತುವಿನಲ್ಲಿ ಲಕ್ನೋ 9 ಗೆಲುವು ಸೇರಿದಂತೆ 18 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿತ್ತು. ಈ ವರ್ಷದ ಐಪಿಎಲ್ ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.