(ವಿಶ್ವ ಕನ್ನಡಿಗ ನ್ಯೂಸ್) : ಕತಾರ್ ನ ನೂತನ ಪ್ರಧಾನಿಯಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರನ್ನು ನೇಮಕ ಮಾಡಲಾಗಿದೆ. ಕತಾರ್ ಆಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಈ ಆದೇಶ ಹೊರಡಿಸಿದ್ದಾರೆ.
ಶೇಖ್ ಮುಹಮ್ಮದ್ ಬಿನ್ ಅಬ್ದುಲ್ ರಹ್ಮಾನ್ ಅಲ್ ಥಾನಿ ಅವರು ಮಂಗಳವಾರ ಬೆಳಿಗ್ಗೆ ಅಮಿರಿ ದಿವಾನದಲ್ಲಿ ನಡೆದ ಸಮಾರಂಭದಲ್ಲಿ ಆಮಿರ್ ಅವರ ಮುಂದೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಡೆಪ್ಯುಟಿ ಆಮಿರ್ ಶೇಖ್ ಅಬ್ದುಲ್ಲಾ ಬಿನ್ ಹಮದ್ ಅಲ್ ಥಾನಿ ಕೂಡ ಸಮಾರಂಭಕ್ಕೆ ಸಾಕ್ಷಿಯಾದರು.
ಹಾಲಿ ಪ್ರಧಾನಿ ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲ್ ಅಜೀಜ್ ಅಲ್ ಥಾನಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಆಮಿರ್ ಹೊಸ ಪ್ರಧಾನಿಯನ್ನು ನೇಮಕ ಮಾಡಿದರು. ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲ್ ಅಜೀಜ್ ಅಲ್ ಥಾನಿ ಅವರು 2020 ರ ಜನವರಿ 28 ರಂದು ಕತಾರ್ ಪ್ರಧಾನಿಯಾಗಿ ಅಧಿಕಾರದಲ್ಲಿದ್ದರು. ಅವರು ಗೃಹ ಸಚಿವ ಹುದ್ದೆಯನ್ನೂ ಹೊಂದಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.