ಢಾಕಾ (ವಿಶ್ವ ಕನ್ನಡಿಗ ನ್ಯೂಸ್) | ಬಾಂಗ್ಲಾದೇಶದ ಢಾಕಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 11 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಢಾಕಾದ ಗುಲಿಸ್ತಾನ್ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ. ಮಂಗಳವಾರ ಸ್ಫೋಟ ಸಂಭವಿಸಿದೆ. ಸುಮಾರು 11 ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಗಾಯಾಳುಗಳನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲವಾರು ಕಚೇರಿಗಳು ಮತ್ತು ಅಂಗಡಿಗಳನ್ನು ಹೊಂದಿರುವ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ. ಸೋಂಕುನಿವಾರಕ ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಅಂಗಡಿಯು ಏಳು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.