ಚಿಕ್ಕಮಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಲಂಚ ಪಡೆಯುವಾಗ ಪುರಸಭೆ ಕಂದಾಯ ಅಧಿಕಾರಿ, ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ. ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು. ಇವರು ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆಯೇ ಲೋಕಾಯುಕ್ತ ಬಲೆಗೆ ಅಧಿಕಾರಿ, ಸಿಬ್ಬಂದಿ ಬಿದ್ದಿದ್ದಾರೆ. ಲೋಲಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.