ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಂಗಳೂರು ವಿಶ್ವವಿದ್ಯಾಲಯದ ಎಂಬಿಎ ಪರೀಕ್ಷೆಯಲ್ಲಿ ಮನೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಆವಿಷ್ಮಾ ಆಳ್ವಾ ಬಿ. ಅವರು ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾರೆ.
ಪುತ್ತೂರಿನ ವಿವೇಕಾನಂದ ಸಂಸ್ಥೆಯಲ್ಲಿ ಶಾಲಾ ಮತ್ತು ಪಿಯುಸಿ ವಿದ್ಯಾಭ್ಯಾಸವನ್ನು ಮಾಡಿದ್ದ ಆವಿಷ್ಮಾ ಆಳ್ವಾ, ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.97% ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರು.
ಆವಿಷ್ಮಾ ಆಳ್ವಾ ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಆಳ್ವಾ ಬೋಳೊಡಿಗುತ್ತು ಮತ್ತು ಅನಿತಾ ಅರುಣ್ ಆಳ್ವಾ ದಂಪತಿಯ ಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.