ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಹತ್ವದ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು 13 ಕೆಜಿ ಗಾಂಜಾ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಕಂಕನಾಡಿ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಪಾಣೆಮಂಗಳೂರಿನ ಅಬ್ದುಲ್ ಸಾದಿಕ್(35) ಮತ್ತು ಬೆಳ್ತಂಗಡಿಯ ಕಕ್ಕಿಂಜೆಯ ನವಾಜ್ (24) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಂದ ವಶ ಪಡಿಸಿಕೊಂಡ ಗಾಂಜಾ ಮೌಲ್ಯ 3,90,000 ಎಂದು ಪೊಲೀಸರು ಅಂದಾಜಿಸಿದ್ದು, ಮೊಬೈಲ್ ಗಳನ್ನೂ ವಶಕ್ಕೆ ಪಡೆಯಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.