ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಚಾಮರಾಜಪೇಟೆಯ ಆಝಾದ್ ನಗರದ 6ನೇ ಕ್ರಾಸ್’ನಲ್ಲಿ ನಡೆದಿದೆ. ವಿನಯ್ ಎಂಬವರ ಪುತ್ರಿ ದೀಕ್ಷಾ ಮಹಡಿ ಮೇಲಿಂದ ಬಿದ್ದು ಮೃತಪಟ್ಟ ಮಗು.
ಕುಟುಂಬ ಸ್ನೇಹಿತರ ಮನೆಗೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಗಂಭೀರ ಗಾಯಗೊಂಡ ಮಗುವನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ, ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.