ಮಡಿಕೇರಿ (ವಿಶ್ವ ಕನ್ನಡಿಗ ನ್ಯೂಸ್) : ಕೊಡಗಿನ ಬಿಜೆಪಿ ಮುಖಂಡ ಸೇರಿದಂತೆ ಮೂವರನ್ನು ದರೋಡೆ ಹಾಗೂ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೈಸ್ಕೂಲ್ ಪೈಸಾರಿ ನಿವಾಸಿ ಹಾಗೂ ಬಿಜೆಪಿ ಪಕ್ಷದ ಬೂತ್ ಅಧ್ಯಕ್ಷ ಶಾಜಿ, ಕೇರಳದ ಶ್ರೀತು ಮತ್ತು ಶರೀಫ್ ಎಂಬ ಮೂವರನ್ನು ಗೋವಾ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇವರು ಪ್ರವಾಸಿ ತಾಣಗಳ ಮನೆ, ರೆಸಾರ್ಟ್ ಮತ್ತು ವಾಸದ ಮನೆಗಳನ್ನು ಗುರಿಯಾಗಿಸಿ ಕೋಟ್ಯಾಂತರ ರೂಪಾಯಿಗಳನ್ನು ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ನಗದು ಹಾಗೂ ಬೆಲೆ ಬಾಳುವ ಕ್ಯಾಮರಾ, ಲ್ಯಾಪ್ಟಾಪ್, ಆಭರಣ ಹಾಗೂ ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.