ಶಿರ್ವ (ವಿಶ್ವ ಕನ್ನಡಿಗ ನ್ಯೂಸ್) : ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಪ್ರಾಧ್ಯಾಪಕರೊಬ್ಬರು ಸಾವನ್ನಪ್ಪಿದ ಘಟನೆ ಹೊನ್ನಾವರದಲ್ಲಿ ನಡೆದಿದೆ. ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್ ಮೃತಪಟ್ಟವರು.
ಅನಂತೇಶ ರಾವ್ ಅವರು ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದ ವೇಳೆ ಹೊನ್ನಾವರ ಬಳಿ ಅವರ ಕಾರು ಕಂಟೈನರ್ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರಿನಲ್ಲಿ ವಾಸವಾಗಿದ್ದ ಅವರು ಪತ್ನಿ ಮಂಗಳೂರು ಎಂ.ವಿ. ಶೆಟ್ಟಿ ಎಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ ಪ್ರಾಂಶುಪಾಲೆ ಶ್ರೀಪ್ರಿಯಾ ಅನಂತೇಶ್ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.