ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್) ; ಬಿಜೆಪಿಯ ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ ಮಾರ್ಚ್ 19ರ ಭಾನುವಾರ ಶಿಡ್ಲಘಟ್ಟ ನಗರದ ಮಯೂರ ವೃತ್ತದಲ್ಲಿನ ಬಿಜೆಪಿಯ ಸೇವಾ ಸೌಧದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿಯೂ ಆದ ಡಾ.ಪದ್ಮಪ್ರಕಾಶ್ ತಿಳಿಸಿದರು.
ಶಿಡ್ಲಘಟ್ಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಸಮಾವೇಶಕ್ಕೆ ಸಕಲ ಸಿದ್ದತೆಗಳು ನಡೆದಿದ್ದು ಶಿಡ್ಲಘಟ್ಟ ನಗರದ ಮಯೂರ ವೃತ್ತದಲ್ಲಿ ಬಿಜೆಪಿಯ ಸೇವಾ ಸೌಧದಲ್ಲಿ ಮಾರ್ಚ್ 19ರ ಭಾನುವಾರ ಸಮಾವೇಶ ನಡೆಯಲಿದೆ ಸೇವಾ ಸೌಧದಲ್ಲಿ ನಡೆದ ಬಿಜೆಪಿ ಮುಖ್ಯಸ್ಥರ ಸಭೆಯ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ಬಿಜೆಪಿ ಮಹಿಳಾ ಮೋರ್ಚ ರಾಜ್ಯ ಕಾರ್ಯದರ್ಶಿ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿಯೂ ಆದ ಡಾ.ಪದ್ಮಪ್ರಕಾಶ್ ಈ ಬಗ್ಗೆ ವಿವರ ನೀಡಿದರು.
ಶಿಡ್ಲಘಟ್ಟ ನಗರದ ಮಯೂರ ವೃತ್ತದಲ್ಲಿನ ಬಿಜೆಪಿಯ ಸೇವಾ ಸೌಧದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಸಮಾವೇಶ ಆರಂಭವಾಗಲಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದಲೂ ಸುಮಾರು 2 ಸಾವಿರ ಮಹಿಳಾ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ವಿಧಾನ ಪರಿಷತ್ತಿನ ಸದಸ್ಯೆ ಭಾರತಿಶೆಟ್ಟಿ, ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಸೇರಿದಂತೆ ಬಿಜೆಪಿಯ ಪ್ರಮುಖರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೇಂದ್ರದಲ್ಲಿನ ಮೋದಿ ನೇತೃತ್ವದ ಹಾಗೂ ರಾಜ್ಯದಲ್ಲಿನ ಬೊಮ್ಮಾಯಿ ನೇತೃತ್ವದ ಸರಕಾರದ ಸಾಧನೆಗಳನ್ನು ಸಮಾವೇಶದಲ್ಲಿ ಸಾರಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸೀಕಲ್ ರಾಮಚಂದ್ರಗೌಡ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಲೀಲಾಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ನರ್ಮದಾರೆಡ್ಡಿ, ತ್ರಿವೇಣಿ, ಕಮಲ, ಸುಜಾತಮ್ಮ, ಅಮೃತ, ಸರೋಜಮ್ಮ, ಸುರೇಂದ್ರಗೌಡ, ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ವರದಿ:ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.