ಪಾಟ್ನಾ (ವಿಶ್ವ ಕನ್ನಡಿಗ ನ್ಯೂಸ್) : ಸನಾತನ ಹಿಂದೂ ಧರ್ಮದ ಹೆಣ್ಣುಮಕ್ಕಳ ಗೌರವ ಮತ್ತು ಘನತೆಯೊಂದಿಗೆ ಯಾರು ಆಟವಾಡುತ್ತಾರೋ ಅಂತವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಒಂದು ವೇಳೆ RJD ನಾಯಕರು ತಮ್ಮ ಹೆಣ್ಣು ಮಕ್ಕಳನ್ನು ಬೇರೆಯವರಿಗೆ ಮದುವೆ ಮಾಡುವುದಾದರೆ ಅವರು ಹಾಗೆ ಮಾಡಲು ಸ್ವತಂತ್ರರು. ನಮ್ಮದು ಹಿಂದೂ ರಾಷ್ಟ್ರವಾಗಿದ್ದು, ಹಿಂದೂ ರಾಷ್ಟ್ರವಾಗಿಯೇ ಉಳಿಯುತ್ತೆ ಎಂದು ಚೌಬೆ ಹೇಳಿದ್ದಾರೆ.
ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ ಹಾಗು ಮುರಳಿ ಮನೋಹರ್ ಜೋಷಿ ಅವರ ಪುತ್ರಿಯರು ಮುಸ್ಲಿಂ ಪುರುಷರನ್ನು ಮದುವೆಯಾಗಿದ್ದು, ಬಿಜೆಪಿ ನಾಯಕರು ತಮ್ಮ ಪುತ್ರಿಯರನ್ನು ಮುಸ್ಲಿಮರಿಂದ ರಕ್ಷಿಸಬೇಕು ಎಂದು ಆರ್ಜೆಡಿ ಶಾಸಕ ಭಾಯಿ ವೀರೇಂದ್ರ ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.