ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಪ್ರಕರಣದಲ್ಲಿ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿಕೊಂಡಿರುವ 8ನೇ ಎಸಿಎಂಎಂ ನ್ಯಾಯಾಲಯವು ಎ.26ಕ್ಕೆ ಹಾಜರಾಗುವಂತೆ ರೂಪಾ ಮೌದ್ಗಿಲ್ ಗೆ ಸಮನ್ಸ್ ಜಾರಿಗೊಳಿಸಿದೆ.
ರೋಹಿಣಿ ಸಿಂಧೂರಿ ಅವರ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಆರೋಪಗಳನ್ನು ಮಾಡಿದ್ದಕ್ಕೆ ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಇದೀಗ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.