ಬೆಳಗಾವಿ (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ದೀರ್ಘ ದಂಡ ನಮಸ್ಕಾರ ಸಲ್ಲಿಸುವಾಗ ಕಾರು ಹರಿದು ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಐಶ್ವರ್ಯ ನಾಯಿಕ (22) ಮೃತಪಟ್ಟ ಯುವತಿ.
ಜಾತ್ರೆ ಹಿನ್ನೆಲೆ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಸಲ್ಲಿಸುವ ಸಂದರ್ಭ ತಲೆ ಮೇಲೆ ಕಾರಿನ ಚಕ್ರ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ಬಂಧಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.