(www.vknews.in) ; ಹಿಂದುಳಿದ ವರ್ಗಗಳ 2ಬಿ ಅಡಿಯಲ್ಲಿ ಮುಸ್ಲಿಮರಿಗೆ ನೀಡುತ್ತಿದ್ದ ಶೇ 4% ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಲಿಂಗಾಯುತ ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿಯ ಸಾವಿರ ಜಮಾಅತ್ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ತೀವೃವಾಗಿ ಖಂಡಿಸಿದ್ದಾರೆ, ಈ ಬಗ್ಗೆ ಬೃಹತ್ ಪ್ರತಿಭಟನೆಯ ಎಚ್ಚರಿಕೆಯನ್ನು ಸಮಿತಿಯು ನೀಡಿದೆ.
ಮುಸ್ಲಿಮರಿಗೆ 2B ಅಡಿಯಲ್ಲಿ ನೀಡುತ್ತಿದ್ದ ಮೀಸಲಾತಿಯನ್ನು ಕೈಬಿಟ್ಟಿರುವ ನಿರ್ದಾರವನ್ನು ಹಿಂಪಡೆಯಲು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ತಿಳಿಸಿರುತ್ತಾರೆ.
ಶೈಕ್ಷಣಿಕವಾಗಿಯೂ, ಸಾಮಾಜಿಕವಾಗಿಯೂ ಹಿಂದುಳಿದಿರುವ ಮುಸ್ಲಿಮರನ್ನು 2ಬಿ ಅಡಿಯಲ್ಲಿ ನಿಡುತ್ತಿದ್ದ ಶೇ 4% ಮೀಸಲಾತಿ ರದ್ದತಿಯೂ ಮುಸ್ಲಿಮರನ್ನು ಶೈಕ್ಷಣಿಕವಾಗಿ ಇನ್ನಷ್ಟು ಹಿಂದೆ ತಳ್ಳಲು ಕಾರಣವಾಗುವ ಬಗ್ಗೆ ತೀವೃ ಕಳವಳ ವ್ಯಕ್ತಪಡಿಸಿದರು.
1979ರ ಏಪ್ರಿಲ್ 9ರ ಮಾನ್ಯ ಕರ್ನಾಟಕ ಹೈಕೋರ್ಟ್ ತೀರ್ಪಿನಲ್ಲಿ “ಮುಸ್ಲಿಮರು ಧಾರ್ಮಿಕ ಅಲ್ಪಸಂಖ್ಯಾತರು ಎಂಬುದು ಅವರನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆಯಲು ಕಾರಣವಾಗವುದಿಲ್ಲ” ಎಂದು ಸ್ಪಷ್ಟವಾಗಿ ಆದೇಶಿಸಿದೆ ಎಂದರು.
ಈ ಬಗ್ಗೆ ಉಳ್ಳಾಲ ದರ್ಗಾ ಸಮಿತಿ ಸಾವಿರ ಜಮಾಅತ್ ನ ಮೊಹಲ್ಲಾ ಪದಾಧಿಕಾರಿಗಳ ಜತೆ ಸಭೆ ಕರೆದು ಮುಂದಿನ ಹೋರಾಟದ ಬಗ್ಗೆ ಹಾಗೂ ಕಾನೂನು ಹೋರಾಟದ ಬಗ್ಗೆ ರೂಪುರೇಶೆ ಕೈಗೊಳ್ಳಲಾಗುವುದು ಎಂದು ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.