ಜೆದ್ದಾ(www.vknews.in): ಸೌದಿ ಅರೇಬಿಯಾದ ಉತ್ತರದ ಆಸಿರ್ನ ಶಿಅರ್ ಘಾಟ್ ಪಾಸ್ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸೌದಿ ಮಾಧ್ಯಮಗಳ ಪ್ರಕಾರ, ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಬ್ರೇಕ್ ಕಳೆದುಕೊಂಡ ಬಸ್ ಸೇತುವೆಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ.
ಸಂಬಂಧಪಟ್ಟ ಮೂಲಗಳ ಪ್ರಕಾರ, ಸಿವಿಲ್ ಡಿಫೆನ್ಸ್ ಮತ್ತು ರೆಡ್ ಕ್ರೆಸೆಂಟ್ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಿದೆ. ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತವಾಗಿದೆ ಎಂಬ ಸೂಚನೆಗಳಿವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.