ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವ್ಯಕ್ತಿಯೊಬ್ಬರು ಕಾಲುಜಾರಿ ನೇತ್ರಾವತಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ. ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಮೃತಪಟ್ಟವರು.
ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವಕ್ಕೆ ಬಂದಿದ್ದ ಸುಮಾರು 20 ರಷ್ಟು ನೆಂಟರು, ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು (ಬಂಬು) ಅಡ್ಡವಾಗಿ ಹಾಕಿದ್ದರು. ಅದರಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.