ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಮಸೀದಿಗೆ ನುಗ್ಗಿ ಮಸೀದಿ ಇಮಾಮ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ದಾಳಿಕೋರರು ಇಮಾಮ್ ಅವರ ಗಡ್ಡವನ್ನು ಕತ್ತರಿಸಿ ಅಮಾನುಷವಾಗಿ ಥಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಜಲ್ನಾದ ಬೊಕಾರ್ಡಾನ್ನ ಅನ್ವಾ ಜಿಲ್ಲೆಯಲ್ಲಿ ಹಿಂಸಾಚಾರ ನಡೆದಿದೆ. ಭಾನುವಾರ ಸಂಜೆ 7.30ಕ್ಕೆ ಘಟನೆ ನಡೆದಿದೆ. ಮಸೀದಿಯ ಇಮಾಮ್ ಜಾಕಿರ್ ಸೈಯದ್ ಖಾಜಾ ಮೇಲೆ ಹಲ್ಲೆ ನಡೆದಿದೆ.
ಥಳಿಸಿದ ಬಳಿಕ ದಾಳಿಕೋರರು ಪರಾರಿಯಾಗಿದ್ದಾರೆ. ಮಸೀದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಜಾಕಿರ್ ಸೈಯದ್ ಖಾಜಾ ರನ್ನು ಸ್ಥಳೀಯರು ಔರಂಗಾಬಾದ್ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ದಾಳಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಭಿಜಿತ್ ಮೋರೆ ತಿಳಿಸಿದ್ದಾರೆ. ದಾಳಿಕೋರರಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಶಿಂಧೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸ್ಥಳದಲ್ಲಿ ಹಲವು ಪೊಲೀಸರನ್ನು ಕೂಡ ನಿಯೋಜಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.