ಕೇರಳ (ವಿಶ್ವ ಕನ್ನಡಿಗ ನ್ಯೂಸ್) : ಮಗ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೇರಳದ ಅಂಬಲಪುಳದಲ್ಲಿ ನಡೆದಿದೆ. ಮದನ್ ಅವರ ಪತ್ನಿ ಇಂದುಲೇಖಾ (54) ಮತ್ತು ಪುತ್ರ ನಿಧಿನ್ (32) ಅವರು ಪುರಕ್ಕಾಡ್ನ ದಕ್ಷಿಣ ತುದಿಯಲ್ಲಿರುವ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ.
ಮೀನುಗಾರ ನಿಧಿನ್ ನಿನ್ನೆ ರಾತ್ರಿ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದನ್ನು ಕೇಳಿದ ಇಂದುಲೇಖಾ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರ ಜೀವ ಉಳಿಸಲಾಗಲಿಲ್ಲ. ನಿಧಿನ್ ಆತ್ಮಹತ್ಯೆಗೆ ಕರಣ ಇನ್ನಷ್ಟೇ ತಿಳಿದು ಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.