ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಪುತ್ತೂರಿನಲ್ಲಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗಂಡ ಮತ್ತು ಮಗ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುತ್ತೂರು ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಗುರುವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಅನ್ನಪೂರ್ಣ (50) ಮೃತರು. ಪತಿ ಹಾಗೂ ಪುತ್ರ ಅಶ್ವಿನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಮೂವರು ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.