ಬೆಳ್ತಂಗಡಿ (www.vknews.in) : ರಾಜ್ಯ ಬಿಜೆಪಿ ಸರ್ಕಾರವು 2ಬಿ ಮೀಸಲಾತಿ ರದ್ದುಗೊಳಿಸಿರುವುದನ್ನು ಖಂಡಿಸಿ 2ಬಿ ಮೀಸಲಾತಿ ಪುನರ್ ಸ್ಥಾಪಿಸಲು ಆಗ್ರಹಿಸಿ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಮಾತನಾಡಿ ಕಳೆದ 30 ವರ್ಷಗಳಿಂದ ರಾಜ್ಯದಲ್ಲಿ ಜಾರಿಯಲ್ಲಿದ್ದ 2ಬಿ ಮೀಸಲಾತಿಯನ್ನು ಮುಸ್ಲಿಂ ಸಮುದಾಯ ಉದ್ಯೋಗ ಮತ್ತು ಶಿಕ್ಷಣದಿಂದ ದೂರವಿಡಲು ಬಿಜೆಪಿ ಸರ್ಕಾರ ಏಕಾಏಕಿ ಕಿತ್ತುಕೊಂಡಿದೆ. ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಷಡ್ಯಂತ್ರದ ಮುಂದುವರಿದ ಭಾಗವಾಗಿ 2(ಬಿ) ಮೀಸಲಾತಿ ರದ್ದುಪಡಿಸಿರುವುದು ಎಂದು ಅವರು ಆರೋಪಿಸಿದರು.
ಪ್ರಗತಿ ಪರ ಚಿಂತಕ ದಾಮೋದರ್ ಬೆಳ್ತಂಗಡಿ ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಜನರ ಬಳಿ ಮತ ಯಾಚನೆ ಮಾಡಲು ಯಾವುದೇ ವಿಷಯವಿಲ್ಲ. ಆದ್ದರಿಂದ ಮುಸ್ಲಿಂ ಸಮುದಾಯದ ಮೀಸಲಾತಿ ರದ್ದು ಮಾಡಿದೆ. ತಕ್ಷಣವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಅಲ್ಪಸಂಖ್ಯಾತರ ಮೀಸಲಾತಿ ರದ್ದು ಮಾಡಿರುವ ನಿರ್ಧಾರವನ್ನು ವಾಪಸು ತೆಗೆದುಕೊಳ್ಳಬೇಕು. ಮೊದಲಿನಂತೆಯೇ ಅಲ್ಪಸಂಖ್ಯಾತರ ಮೀಸಲಾತಿಯನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.
ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ ಮುಸ್ಲಿಂರನ್ನು ಕೇವಲ ಓಟು ಬ್ಯಾಂಕ್ ಆಗಿ ಬಳಸುತ್ತಿರುವ ಕಾಂಗ್ರೆಸ್, ಉಳಿದ ಪಕ್ಷಗಳ ನಾಯಕರು ಈವಾಗ ಎಲ್ಲಿದ್ದಾರೆ. ಸಂವಿಧಾನದ ಆಶಯಗಳಂತೆ ಸರ್ಕಾರ ಆಡಳಿತ ನಡೆಸಬೇಕೇ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಅಲ್ಲ. ಈ ನಿಟ್ಟಿನಲ್ಲಿ ಮುಸ್ಲಿಮ್ ಸಮುದಾಯಕ್ಕೆ ನಿಗದಿಯಾಗಿದ್ದ 2(ಬಿ) ಮೀಸಲಾತಿಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಗಷ್ಟೇ ನಮ್ಮ ಹೋರಾಟ ನಿಲ್ಲುವುದಿಲ್ಲ, ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು. ಬೆಳ್ತಂಗಡಿ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಪತ್ರವನ್ನು ಸಲ್ಲಿಸಿದರು.
ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಸಂಘಟನಾ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಫಝಲ್ ರಹಮಾನ್ ಉಜಿರೆ, ಅಶ್ರಫ್ ಕಟ್ಟೆ, ಸಾದಿಕ್ ಲಾಯಿಲ, ಸ್ವಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಅಝೀಝ್ ಝುಹರಿ, ಬ್ಲಾಕ್ ನಾಯಕರು, ಗ್ರಾಮ ಸಮಿತಿ ಪದಾಧಿಕಾರಿಗಳು, ಸರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.