ಕಿನ್ನಿಗೋಳಿ (ವಿಶ್ವ ಕನ್ನಡಿಗ ನ್ಯೂಸ್) : ತೀವ್ರ ಜ್ವರದಿಂದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ನಡೆದಿದೆ. ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ, 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16)ಮೃತಪಟ್ಟ ಬಾಲಕ.
ಕಳೆದ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದ ಹಿಲಾಲ್ ರನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಾಲಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.