ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಸೊಳ್ಳೆ ಕಾಯಿಲ್ ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದ್ದು, ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ಬಳಿಕ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.
ಘಟನೆ ನಡೆದ ಮನೆಯಲ್ಲಿ ಒಟ್ಟು ಎಂಟು ಮಂದಿ ಇದ್ದು, ಅವರಲ್ಲಿ ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.