ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಹೊರವಲಯದ ಕುಳಾಯಿಯ ಮಾನಸ (22) ಎಂಬ ಯುವತಿ ಮಾ.25ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರ ಚಹರೆ ಇಂತಿದೆ : 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವಿಲು ಗರಿಯ ಹಚ್ಚೆ ಗುರುತು ಇದೆ. ಅವರು ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.
ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.