ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಾನುವಾರು ಮಾರಾಟಗಾರ ಇದ್ರೀಷ್ ಪಾಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 5 ದಿನಗಳಿಂದ ತಲೆಮರೆಸಿಕೊಂಡಿದ್ದ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು 5 ಮಂದಿಯನ್ನು ಸಾತನೂರು ಠಾಣೆ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.
ಪುನೀತ್ ಕೆರೆಹಳ್ಳಿ ಹಾಗೂ ಆತನ ತಂಡವು ಮಾರ್ಚ್ 31 ರಂದು ಗೋವುಗಳನ್ನು ಸಾಗಿಸುತ್ತದ್ದ ಕ್ಯಾಂಟರ್ ತಡೆದು ಜಾನುವಾರು ಸಾಗಾಟ ಮಾಡುತ್ತಿದ್ದವಾರ ಮೇಲೆ ಗಂಭೀರ ಹಲ್ಲೆ ನಡೆಸಿದ್ದು, ಲಕ್ಷಾನಂತರ ರುಪಾಯಿಗೆ ಬೇಡಿಕೆ ಕೂಡ ಇಟ್ಟಿದ್ದರು ಎನ್ನಲಾಗಿದೆ. ಹಲ್ಲೆ ನಡೆಸಿದ ಮಾರನೇ ದಿನ ಕ್ಯಾಂಟರ್ ವಾಹನದಲ್ಲಿದ್ದ ಇದ್ರೀಷ್ ಪಾಷ(35) ಶವವಾಗಿ ಪತ್ತೆಯಾಗಿದ್ದರು. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿದ್ದು, ಅವರ ದೇಹದ ಮೇಲೆ ಹಲ್ಲೆ ನಡೆಸಿದ ರೀತಿಯ ಗುರುತುಗಳಿದ್ದವು.
ಈ ಸಂಬಂಧ ಮೃತ ಇದ್ರೀಷ್ ಪಾಷ ಸಹೋದರ ಸಾತನೂರು ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು. IPC ಸೆಕ್ಷನ್ 341, 504, 506, 324, 302, 34 ರ ಅಡಿ ಪೊಲೀಸ್ಕೇ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಕಳೆದ 5 ದಿನದಿಂದ ಪುನೀತ್ ಮತ್ತು ಆತನ ಗ್ಯಾಂಗ್ ತಲೆ ಮರೆಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ 4 ತಂಡಗಳನ್ನು ರಚಿಸಿದ್ದರು. ಇದೀಗ ಅಂತಿಮವಾಗಿ ಆರೋಪಿಗಳು ರಾಜಸ್ಥಾನದಲ್ಲಿ ಸಿಕ್ಕಿಬಿದ್ದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.