ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮೇ 10ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಮಂದಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದೆ. ಚುನಾವಣಾ ಘೋಷಣೆಗೂ ಮುನ್ನವೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದ ಕಾಂಗ್ರೆಸ್ ಇದೀಗ ಎರಡನೇ ಪಟ್ಟಿ ಪ್ರಕಟಿಸಿದೆ. ಇದುವರೆಗೂ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಇನ್ನೂ 58 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.
ಮಂಡ್ಯದ ಮೇಲುಕೋಟೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಹಾಕದೆ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕಾಂಗ್ರೆಸ್ ಬೆಂಬಲಿಸಲಿದೆ. ಟಿಕೆಟ್ ಆಕಾಂಕ್ಷಿಗಳ ತೀವ್ರ ಹಣಾಹಣಿ ಇರುವ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಪುತ್ತೂರು, ಚಿಕ್ಕಮಗಳೂರು ಮೊದಲಾದ ಹಲವು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿಲ್ಲ.
ಅಭ್ಯರ್ಥಿಗಳ ಪಟ್ಟಿ ಹೀಗಿದೆ…
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.