ತಮಿಳುನಾಡು (ವಿಶ್ವ ಕನ್ನಡಿಗ ನ್ಯೂಸ್) : ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ತಿರುವೆನ್ನೈನಲ್ಲೂರು ತಾಲೂಕಿನಲ್ಲಿ 108 ಆಂಬ್ಯುಲೆನ್ಸ್ ಬರುವುದು ವಿಳಂಬವಾದ ಕಾರಣ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡಗಮೇಡು ಗ್ರಾಮದ ನಿವಾಸಿ ಟಿ. ಸಂಧ್ಯಾ ಮೃತಪಟ್ಟವರು.
ಹೊಟ್ಟೆನೋವು ಕಾಣಿಸಿಕೊಂಡ ನಾಲ್ಕು ತಿಂಗಳ ಗರ್ಭೀಣಿ ಸಂಧ್ಯಾ ಅವರನ್ನು ಕುಟುಂಬಸ್ಥರು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಆಕೆಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ, ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲು ವೈದ್ಯರು ತಿಳಿಸಿದ್ದಾರೆ. ಕೂಡಲೇ ಕುಟುಂಬವು 108 ಕರೆ ಮಾಡಿ ಆಂಬ್ಯುಲೆನ್ಸ್ ಒದಗಿಸುವಂತೆ ಕೇಳಿದೆ.
ಆದರೆ, ಆಂಬ್ಯುಲೆನ್ಸ್ ಎರಡು ಗಂಟೆಗಳ ನಂತರ ಬಂದ ಕಾರಣ ಸಂಧ್ಯಾ ಅವರ ಸ್ಥಿತಿ ಹದಗೆಟ್ಟಿತ್ತು. ಬಳಿಕ ಗ್ರಾಮದಿಂದ 15 ಕಿಲೋಮೀಟರ್ ದೂರದಲ್ಲಿರುವ ಮುಂಡಿಯಂಬಕ್ಕಂ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.