ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) ; ಪುತ್ತೂರು ಕ್ಷೇತ್ರದ ಹಾಲಿ ಬಿಜೆಪಿ ಶಾಸಕರು ಮಹಿಳೆ ಜೊತೆಗಿರುವ ಅಶ್ಲೀಲ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಜೆಪಿ ಟಿಕೆಟ್ ಘೋಷಣೆ ಆಗುವ ಮೊದಲೇ ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗಿದ್ದು, ಇದು ಅವರ ಮುಂದಿನ ರಾಜಕೀಯ ಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ.
ವೈರಲ್ ಆಗುತ್ತಿರುವ ಫೋಟೋವನ್ನು ಶಾಸಕರು ಅಲ್ಲಗೆಳೆದಿದ್ದು, ನನ್ನ ಫೋಟೋವನ್ನು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ, ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದಿದ್ದಾರೆ. ಅಲ್ಲದೇ ಈ ಫೋಟೋವನ್ನು ವೈರಲ್ ಮಾಡುತ್ತಿರುವವ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.