ಬೆಳ್ತಂಗಡಿ (www.vknews.in) : ಬೆಳ್ತಂಗಡಿ ತಾಲೂಕಿನ ನಾವೂರು ನಲ್ಲಿ ಏಪ್ರಿಲ್ 6 ರಂದು ನಡೆದ ‘ಪುರುಷರ ಕಟ್ಟುವುದು ‘ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮದ ವಿರುದ್ಧ ನಿಂದನೆ ಮತ್ತು ಮುಸ್ಲಿಂ ಭಾವನೆಗೆ ಧಕ್ಕೆ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಎಸ್ಡಿಪಿಐ ಪಕ್ಷದ ಅಧ್ಯಕ್ಷ ನವಾಝ್ ಕಟ್ಟೆ ಅವರು ದೂರು ದಾಖಲಿಸಿದರು.
ಮುಸ್ಲಿಂ ಮಹಿಳೆಯರ ಬುರ್ಖಾ ಮತ್ತು ಪುರುಷರ ಟೋಪಿ ಹಾಕಿಕೊಂಡು ಕಿಡಿಗೇಡಿಗಳು ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮವನ್ನು ಎತ್ತಿ ಕಟ್ಟಿ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವ ಉದ್ದೇಶದಿಂದ ಈ ರೀತಿ ಮಾಡಿರುತ್ತಾರೆ. ಈ ಕಾರ್ಯಕ್ರಮಕ್ಕೆ ನೇತೃತ್ವವನ್ನು ನೀಡಿದವರು, ಆಯೋಜಕರು ಮತ್ತು ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂದರ್ಭದಲ್ಲಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲ, ಅಶ್ರಫ್ ಕಟ್ಟೆ, ಕುವೆಟ್ಟು ಬ್ಲಾಕ್ ಕಾರ್ಯದರ್ಶಿ ಶಮೀಮ್ ಯೂಸುಫ್, ಹುಸೈನ್ ಪಡಂಗಡಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.