ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್) : ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಳ ಬಳಿ ಕೆರೆಯೊಂದರಲ್ಲಿ ಪತ್ತೆಯಾಗಿದೆ.
ಬಿ.ಸಿ.ರೋಡು ಮಿತ್ತಬೈಲ್ ನಿವಾಸಿ ಅಬ್ದುಲ್ ರಝಕ್ ರವರ ಮಗ ಅಝೀಮ್(13) ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಆತನ ಮೊಬೈಲ್ ಗೆ ಕರೆಮಾಡಿದರೂ ಸ್ವೀಕರಿಸದ ಕಾರಣ ಮನೆಯವರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು,
ನಂತರ ಮೊಬೈಲ್ ಲೊಕೇಶನ್ ಆಧಾರದಲ್ಲಿ ಕಳ್ಳಿಗೆ ಗ್ರಾಮದಲ್ಲಿ ಹುಡುಕಾಟ ನಡೆಸಿದಾಗ ಸಮೀಪದ ಕೆರೆಯ ಬಳಿ ಬಾಲಕನ ಬಟ್ಟೆ, ಮೊಬೈಲ್ ಕಂಡುಬಂದಿತ್ತು. ಕೆರೆಯಲ್ಲಿ ಹುಡುಕಿದಾಗ ತಡರಾತ್ರಿ ಬಾಲಕನ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.