ಹೊಸದಿಲ್ಲಿ (ವಿಶ್ವ ಕನ್ನಡಿಗ ನ್ಯೂಸ್) : ರಾಮನವಮಿಯಂದು ದ್ವೇಷಪೂರಿತ ಭಾಷಣ ಮಾಡುವ ಮೂಲಕ ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಲಪಂಥೀಯ ನಾಯಕಿ ಕಾಜಲ್ ಹಿಂದೂಸ್ತಾನಿ ಅವರನ್ನು ಗುಜರಾತ್ನಲ್ಲಿ ಬಂಧಿಸಲಾಗಿದೆ. ಇದೇ ತಿಂಗಳ 1ರಂದು ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆಯ ಉನಾದಲ್ಲಿ ಗಲಭೆ ನಡೆದಿತ್ತು. ಮಾರ್ಚ್ 30 ರಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಕಾರ್ಯಕ್ರಮವೊಂದರಲ್ಲಿ ಕಾಜಲ್ ದ್ವೇಷದ ಭಾಷಣ ಮಾಡಿದ್ದರು.
ಕಾಜಲ್ ಉನಾ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ನೀಡಲಾಗಿದೆ. ಸ್ವಯಂ ಘೋಷಿತ ರಾಷ್ಟ್ರೀಯವಾದಿ ಕಾಜಲ್ ಹಿಂದೂಸ್ತಾನಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ. VHP ಸ್ಥಳಗಳಲ್ಲಿ ಅವರದ್ದು ಸಾಮಾನ್ಯ ಉಪಸ್ಥಿತಿಯಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.