ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ನಾನು ಸ್ವ ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಈಶ್ವರಪ್ಪ ತಿಳಿಸಿದ್ದಾರೆ.
ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಕಳೆದ 40 ವರ್ಷಗಳಲ್ಲಿ ಪಕ್ಷ ನನಗೆ ಪಕ್ಷ ಸಾಕಷ್ಟು ಜವಾಬ್ದಾರಿಗಳನ್ನು ನೀಡಿದೆ. ನಾನು ಬೂತ್ ಮಟ್ಟದಿಂದ ರಾಜ್ಯದ ಉಪಮುಖ್ಯಮಂತ್ರಿಯಾಗುವ ಗೌರವದ ಸ್ಥಾನಮಾನ ನೀಡಿದ ಪಕ್ಷದ ಹಿರಿಯ ನಾಯಕರಿಗೆ ನನ್ನ ಅನಂತ ಧನ್ಯವಾದಗಳು ಎಂದು ಅವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.